


ನವೆಂಬರ್ 1 ರಂದು ಕುಲಶೇಖರ ಸೇಕ್ರೆಡ್ ಹಾರ್ಟ್ಸ್ ಹಿ. ಪ್ರಾ. ಆಂಗ್ಲ ಮಾಧ್ಯಮ ಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯಿನಿ ಭ| ರೀಟಾ ಶರಲ್ ರವರು ವಹಿಸಿದ್ದರು. ಮುಖ್ಯ ಅತಿಥಿ ಶಿಕ್ಷಕಿ ಪವಿತ್ರ, ಸಹಾಯಕ ಮುಖ್ಯೋಪಾಧ್ಯಾಯಿನಿ ಭ| ಪ್ರಭಾತ್ ಉಪಸ್ಥಿತರಿದ್ದರು.
ಕಾರ್ಯಕ್ರಮವು ಪ್ರಾರ್ಥನಾ ವಿಧಿಯೊಂದಿಗೆ ಆರಂಭಗೊಂಡು ನಂತರ ಸ್ವಾಗತ ಭಾಷಣ, ಕನ್ನಡ ಉಳಿಸಿ ಕನ್ನಡ ಬೆಳೆಸಿ ಕಿರು ನಾಟಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನೆರವೇರಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕನ್ನಡ ನಾಡು, ನುಡಿ, ಸಂಸ್ಕೃತಿ ಮತ್ತು ಪರಂಪರೆಯ ಮಹತ್ವವನ್ನು ನೃತ್ಯದ ಮೂಲಕ ಪ್ರಸ್ತುತ ಪಡಿಸಿದರು. ಮುಖ್ಯ ಅತಿಥಿ ಶಿಕ್ಷಕಿ ಪವಿತ್ರರವರು ಕನ್ನಡ ರಾಜ್ಯೋತ್ಸವದ ಮಹತ್ವವನ್ನು ಹೇಳಿದರು. ಕಾರ್ಯಕ್ರಮವು ವಂದನಾರ್ಪಣೆ ಮತ್ತು ನಾಡಗೀತೆಯೊಂದಿಗೆ ಮುಕ್ತಾಯ ಗೊಂಡಿತು.